Advertisement

ಮಳೆ ಮುನ್ಸೂಚನೆ: ಸೋಮವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

09:18 PM Dec 11, 2022 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೀತಗಾಳಿ ಮತ್ತು ಮಳೆಯ ಮುನ್ಸೂಚನೆಯ ಇರುವ ಕಾರಣ ಶಾಲಾ ಕಾಲೇಜುಗಳ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಡಿ 12 ಸೋಮವಾರಂದು ಶಾಲಾ ಕಾಲೇಜುಗಳ ತರಗತಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.

Advertisement

ಉದಯವಾಣಿಯೊಂದಿಗೆ ಮಾಹಿತಿಯನ್ನು ಹಂಚಿಕೊಂಡಿರುವ ಜಿಲ್ಲಾಧಿಕಾರಿಗಳು ರಜೆಯನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯರಾಂರೆಡ್ಡಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ ಅದರಂತೆ ಡಿಡಿಪಿಐ ಅವರು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವ ವಿಚಾರವನ್ನು ತಮ್ಮ ಅಧೀನದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಶೀತಗಾಳಿ ಮತ್ತು ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಜನ ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ ಭಾನುವಾರಂದು ಸಹ ಜಿಲ್ಲೆಯಲ್ಲಿ ಜಡಿ ಮಳೆಯ ಪ್ರಭಾವ ಮುಂದುವರೆದಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ ಮಕ್ಕಳ ಆರೋಗ್ಯದ ದೃಷ್ಠಿಯಿಂದ ಜಿಲ್ಲಾಧಿಕಾರಿಗಳು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ನಾಳೆಯಿಂದ “ಬಾನ್‌ ದನಿ’ ರೇಡಿಯೋ ಪಾಠ ಕಾರ್ಯಕ್ರಮ

Advertisement

Udayavani is now on Telegram. Click here to join our channel and stay updated with the latest news.

Next