ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಜಿಲ್ಲೆಯಾದ್ಯಂತ ಸಾಕಷ್ಟು ಅಸ್ತಿಪಾಸ್ತಿಗಳು ನಾಶವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕಳಸ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ನಲ್ಲಿ ಮನೆಯ ಮೇಲ್ಛಾವಣಿ ಕುಸಿದು ವಳ್ಳಿಯಮ್ಮ ಎಂಬ ಮಹಿಳೆಯೊಬ್ಬರು ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆಯೂ ನಡೆದಿದೆ.
ಮಳೆಯ ಅಬ್ಬರಕ್ಕೆ ಸಾಕಷ್ಟು ನಷ್ಟ ಸಂಭವಿಸಿದ್ದು 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ, ಜೊತೆಗೆ ವರುಣನ ರುದ್ರ ನರ್ತನಕ್ಕೆ 4 ಹಸುಗಳು ಸಾವನ್ನಪ್ಪಿವೆ.
ಬಯಲುಸೀಮೆ ಕಡೂರು, ತರೀಕೆರೆಯಲ್ಲೂ ಭಾರೀ ಮಳೆಯಾಗುತ್ತಿದ್ದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಈದ್ಗಾ ಮೈದಾನದಲ್ಲಿ ಶಿವಲಿಂಗ ಸ್ಥಾಪನೆ ಎಚ್ಚರಿಕೆ: ಇಂದು ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ