Advertisement

ಜು. 14ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ

07:31 PM Jul 10, 2021 | Team Udayavani |

ಬೆಂಗಳೂರು: ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು. 14ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು. 11ರಂದು ರೆಡ್‌, ಜು. 12 ಮತ್ತು 13ರಂದು ಆರೆಂಜ್‌ ಹಾಗೂ ಜು. 14ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಜು. 14ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ : ಎರಡನೇ ಡೋಸ್‌ ಪಡೆಯದಿದ್ದರೆ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಿಲ್ಲ: ಆರೋಗ್ಯ ಇಲಾಖೆ

Advertisement

Udayavani is now on Telegram. Click here to join our channel and stay updated with the latest news.

Next