ಮಡಿಕೇರಿ: ಜಿಲ್ಲೆಯ ಹಲವೆಡೆ ಗುರುವಾರ ಸಂಜೆ ಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಸುಂಟಿಕೊಪ್ಪದಲ್ಲಿ ಭಾರೀ ಗಾತ್ರದ ಮರವೊಂದು ಮನೆಯ ಮೇಲಕ್ಕೆ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಂಟಿಕೊಪ್ಪ ನಾಡಕಚೇರಿ ಹಿಂಭಾಗದಲ್ಲಿನ ಲೋಕೋ ಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಾಗಿರುವ ಮುಕ್ತಾರ್ ಅವರ ಮನೆಮೇಲೆ ಭಾರೀ ಗಾತ್ರದ ಮಾವಿನ ಮರ ಉರುಳಿ ಬಿದ್ದಿತು. ಮನೆಯ ಛಾವಣಿ ಹಾನಿಗೀಡಾಗಿದೆ. ಆಗ ಮನೆಯ ಒಳಗೆ ನಾಲ್ವರು ಮಕ್ಕಳು ಸೇರಿದಂತೆ ಆರು ಮಂದಿ ಇದ್ದರೂ ಎಲ್ಲರೂ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.
ಸ್ಥಳಕ್ಕೆ ಗ್ರಾ.ಪಂ. ಸಿಬಂದಿ ಹಾಗೂ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ, ಮರ ತೆರವಿಗೆ ಕ್ರಮ ಕೈಗೊಂಡಿದ್ದಾರೆ.