Advertisement

ನಾಪೋಕ್ಲು ಪರಿಸರದಲ್ಲಿ ಭಾರೀ ಮಳೆ, ಹಾನಿ: ವಿವಿಧೆಡೆ ರಸ್ತೆಗೆ ಉರುಳಿದ ಮರಗಳು

12:04 AM May 18, 2023 | Team Udayavani |

ಮಡಿಕೇರಿ: ನಾಪೋಕ್ಲುವಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಗಾಳಿಯೊಂದಿಗೆ ಒಂದು ಇಂಚಿಗೂ ಅಧಿಕ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಮರಗಳು, ವಿದ್ಯುತ್‌ ಕಂಬಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.

Advertisement

ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯ ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ಮರವೊಂದು ರಸ್ತೆಗೆ ಅಡ್ಡ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಯಿತು. ನಾಪೋಕ್ಲು – ಭಾಗಮಂಡಲ ಮುಖ್ಯರಸ್ತೆಯ ಹಳೇತಾಲೂಕಿನಲ್ಲಿ ತೆಂಗಿನ ಮರವೊಂದು ಅಜ್ಜೆàಟ್ಟಿರ ರಾಜ ಅವರ ಟಯರ್‌ ಅಂಗಡಿಯ ಮೇಲೆ ಬಿದ್ದು ನಷ್ಟ ಸಂಭವಿಸಿದೆ.

ಅಪಾಯದಿಂದ ಪಾರು
ತೆಂಗಿನ ಮರ ಬೀಳುವ ಸಂದರ್ಭದಲ್ಲಿ ಮಂಗಳೂರಿನಿಂದ ಭಾಗಮಂಡಲಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕುಟುಂಬವೊಂದು ಇದೇ ಮಳಿಗೆಯ ಮುಂಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ನಿಂತಿತ್ತು. ಮರ ಬಿದ್ದರೂ ಅದೃಷ್ಟವಶಾತ್‌ ಅವರು ಅಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್‌ ವ್ಯತ್ಯಯ
ಗಾಳಿ ಮಳೆಯಿಂದ ವಿವಿಧೆಡೆ ಅಲವು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ ವಾಗಿದೆ. ಎರಡು ಕಡೆಗಳಲ್ಲಿ ಒಂದೇ ಸಮಯಕ್ಕೆ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ನಾಪೋಕ್ಲು ಮುಖ್ಯರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಸ್ಥಳಕ್ಕೆ ನಾಪೋಕ್ಲು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ, ಸದಸ್ಯ ಅರುಣ್‌ ಬೇಬ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್‌, ನಾಪೋಕ್ಲು ಸೆÓR… ಇಲಾಖೆಯ ಸಿಬಂದಿ ಭೇಟಿ ನೀಡಿ ಸಾರ್ವಜನಿಕರ ಸಹಕಾರದೊಂದಿಗೆ ರಸ್ತೆಯಲ್ಲಿದ್ದ ಮರಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement
Advertisement

Udayavani is now on Telegram. Click here to join our channel and stay updated with the latest news.

Next