Advertisement

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

08:27 AM Jul 08, 2024 | Team Udayavani |

ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.

Advertisement

ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ‌ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟೆ, ಗದ್ದೆಗಳು ಜಲಾವೃತಗೊಂಡಿದೆ.

ಕರಂಬಳ್ಳಿ ವೆಂಕಟರಮಣ ಲೇಔಟ್ ನ ಹಲವು ಮನೆಗಳು ಜಲಾವೃತಗೊಂಡಿರುವ ಬಗ್ಗೆ ವರದಿಯಾಗಿದೆ.

ಭಾರಿ ಮಳೆಯಿಂದ ನಗರದಲ್ಲಿನ  ಮಳೆ‌ನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ ಹತ್ತಾರು ಮನೆಗಳು ಜಲಾವೃತಗೊಳ್ಳುವ ಆತಂಕ ಎದುರಾಗಿದೆ. ಕೆಲವು ಕಡೆಗಳಲ್ಲಿ ಎದುರಿನ ಅಂಗಳದಲ್ಲಿ ನಿಲ್ಲಿಸಲಾದ ಬೈಕ ಕಾರುಗಳು ಕೂಡ ನೀರು ಪಾಲಾಗುತ್ತಿದೆ. ಈ ಮನೆಗಳ ಮಕ್ಕಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡ ಜಲಾವೃತ ಗೊಂಡಿರುವುದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗುತ್ತಿರುವ ಬಗ್ಗೆ ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next