ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಂಗಳವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರವೂ ಜೋರಾಗಿಯೇ ಇತ್ತು.
ಮೊದಲ ಮಳೆಗೆ ಮಣಿಪಾಲದ (ಶಿವಳ್ಳಿ) ಕೈಗಾರಿಕಾ ಪ್ರದೇಶ ಕೆಸರುಮಯವಾಗಿದೆ. ಇಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಅರ್ಧಂಬರ್ಧವಾಗಿರುವ ಕಾರಣ ಕೈಗಾರಿಕೆ ಪ್ರದೇಶದ ಮುಖ್ಯ ರಸ್ತೆ ಚರಂಡಿಯಂತಾಗಿ ಬಿಟ್ಟಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೊಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಬಿಸಿಲು ಮತ್ತು ಉರಿಸೆಕೆಯಿಂದ ಕೂಡಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆ ಮೋಡದಿಂದ ಕೂಡಿದ್ದು, ಕೆಲವೆಡೆ ತುಂತುರು ಮಳೆಯಾಗಿದೆ.
ಮಂಗಳೂರಿನಲ್ಲಿ 35.6 ಡಿ.ಸೆ. ಗರಿಷ್ಠ ಮತ್ತು 26.5 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.