ಚಿಕ್ಕಮಗಳೂರು/ತೀರ್ಥಹಳ್ಳಿ/ಕಾರವಾರ: ಉತ್ತರ ಕನ್ನಡ ಸೇರಿದಂತೆ ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತೀರ್ಥಹಳ್ಳಿ, ಹಾಗೂ ಕಾರವಾರ ತಾಲೂಕು ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ 4 ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಿದ್ದಾರೆ.
ಕಾರವಾರ ತಾಲೂಕಿನ ಅಂಕೋಲಾ, ಕುಮಟಾ, ಹೊನ್ನಾವರ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಜೋಯಿಡಾ ,ಭಟ್ಕಳ ,ಉತ್ತರ ಕನ್ನಡದಲ್ಲಿ ಜಿಲ್ಲಾಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಅಯಾ ತಾಲೂಕಿನ ಬಿಇಒ ರಜೆ ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ತೀರ್ಥಹಳ್ಳಿ ಬಿಇಒ ರಾಮಪ್ಪ ಗೌಡ ರಜೆ ಘೋಷಣೆ ಮಾಡಿದ್ದಾರೆ.
ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಹಾಗೂ ಘಟ್ಟದ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಹಳಿಯಾಳ, ದಾಂಡೇಲಿ ಹೊರತುಪಡಿಸಿ, ಉಳಿದ ತಾಲ್ಲೂಕು ಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಿರ್ಜಾನ್ ದಿಂದ ಶಿರಸಿಗೆ ತೆರಳುವ ತಿರುವಿನ ರಸ್ತೆಯಲ್ಲಿ ಗುಡ್ಡದಿಂದ ಮಳೆನೀರು ರಸ್ತೆಗೆ ಹರಿಯುತ್ತಿರುವ ಸನ್ನಿವೇಶ ಗುಡ್ಡ ಕುಸಿತದ ಭೀತಿಯನ್ನು ಸೃಷ್ಟಿಸಿದೆ.
ಮಲೆನಾಡು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.