ಚೆನ್ನೈ: ರವಿವಾರ ರಾತ್ರಿ ತಮಿಳುನಾಡಿನಾದ್ಯಂತ ಭಾರಿ ಮಳೆಯಾಗಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ ಪರಿಣಾಮ ತಾತಮಿಳುನಾಡಿನ ಹಲವು ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಮಳೆ ಹಿನ್ನೆಲೆಯಲ್ಲಿ ಸೋಮವಾರ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ ಪ್ರಸ್ತುತ ಕೊಮೊರಿನ್ ಪ್ರದೇಶ ಮತ್ತು ಅದರ ನೆರೆಹೊರೆಯ ಪ್ರದೇಶದಲ್ಲಿ ಚಂಡಮಾರುತಡಾ ಬೀಸುವ ಮುನ್ಸೂಚನೆ ಇದೆ ಎನ್ನಲಾಗಿದೆ.
ರವಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ನಾಲ್ಕು ಜಿಲ್ಲೆಗಳ ಹಲವು ಪ್ರದೇಶಗಳು ಜಲಾವೃತವಾಗಿದೆ. ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಸೋಮವಾರ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪ್ರವಾಹದ ಪರಿಣಾಮ ರೈಲು ಹಳಿಗಳು ಮುಳುಗಿದ್ದು ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.