Advertisement

Heavy Rain: ಪ್ರವಾಹ, ಭೂಕುಸಿತ ಪರಿಸ್ಥಿತಿಗಳ ಎದುರಿಸಲು ಸಜ್ಜಾಗಿ: ಸಿಎಂ ಸಿದ್ದರಾಮಯ್ಯ

09:37 PM Jul 30, 2024 | Team Udayavani |

ಹೊಸದಿಲ್ಲಿ: ರಾಜ್ಯದಲ್ಲೆಡೆ ಭಾರಿ ಮಳೆಯಾಗುತ್ತಿರುವುದರಿಂದ  ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವ ಜೊತೆಗೆ ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ.

Advertisement

ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ  ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಕೂಡ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ:
Wayanadu Landslide: ಕರ್ನಾಟಕದಲ್ಲೂ ಕಟ್ಟೆಚ್ಚರ ಅಗತ್ಯ: ಕೇಂದ್ರ ಸಚಿವ ಕುಮಾರಸ್ವಾಮಿ

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯ ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳ ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳ ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸಿ , ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸಿ ಎಂದು ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next