Advertisement

ಬೆಳಗಾವಿ: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥ

09:54 AM Aug 07, 2019 | Team Udayavani |

ಬೆಳಗಾವಿ: ಜಿಲ್ಲೆಯಾಧ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹೊರವಲಯದಲ್ಲಿರುವ ಸಾಂಬ್ರಾ ವಿಮಾನ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲೇ ಭೂಮಿ ಕುಸಿತವಾಗಿದೆ.

Advertisement

ನಿರಂತರವಾಗಿ ಮಳೆ ಸುರಿಯುತ್ತಿದ್ದು ಭಾರೀ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಈ ಅವಘಡ ಸಂಭವಿಸಿದೆ. ಕುಸಿದ ಜಾಗದಲ್ಲೇ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಹಾಗೂ ಸಾಂಬ್ರಾ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಖಾನಾಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಲಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಪ್ರವಾಹದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

ಇದರಿಂದ ಮಲಪ್ರಭಾ ಜಲಾಶಯಕ್ಕೆ 40 ಸಾವಿರ ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ. ಒಟ್ಟು 2079.50 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2073.90 ಅಡಿ ನೀರು ಸಂಗ್ರಹವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next