ವಿಜಯಪುರ: ಜಿಲ್ಲೆಯಲ್ಲಿ ಮಂಗಳವಾರ ಜೋರು ಮಳೆಗೆ ಹಲೆವೆಡೆ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ದಲಿತ ಕಾಲೋನಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಸಾತಿಹಾಳ ಗ್ರಾಮದ ದಲಿತ ಕಾಲೋನಿಯ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ಧವಸ ಧಾನ್ಯ ಹಾಗೂ ಇತರೆ ವಸ್ತುಗಳು ನೀರು ಪಾಲಾಗಿವೆ.
ಮನೆಗಳಿಗೆ ಮಳೆಯ ನೀರು ನುಗ್ಗಿದ್ದರಿಂದ ದಲಿತ ಕಾಲೋನಿ ಜನರು ಜನರ ಪರದಾಟ ನಡೆಸಿದ್ದು, ಮನೆಗೆ ನುಗ್ಗಿದ ಮಳೆ ನೀರನ್ನು ಹೊರ ಹಾಕಲು ಹರ ಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ:ಕೇರಳದಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ದೇಶಾದ್ಯಂತ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ
ಪ್ರತಿ ಮಳೆ ಸಂದರ್ಭದಲ್ಲೂ ತಮ್ಮ ಕಾಲೋನಿಗೆ ಮಳೆ ನೀರು ನುಗ್ಗುತ್ತಿದ್ದು, ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕೂಡಲೇ ನಮ್ಮ ಕಾಲೋನಿ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಜನಪ್ರತಿನಿಧಿಗಳು ಕಾಲೋನಿ ಸ್ಥಳಾಂತರಕ್ಕೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ