ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದಲ್ಲಿ ಮಳೆಯ ಆರ್ಭಟದಿಂದ ನಾಗರಿಕರು ಬೆಚ್ಚಿಬಿದ್ದಿದ್ದಾರೆ
ಗುಡುಗು ಸಹಿತ ಸುರಿದ ಮಳೆಯಿಂದ ಅವಾಂತರವೇ ಸೃಷ್ಟಿಯಾಗಿದೆ ಮಳೆ ನೀರು ಸರಾಗವಾಗಿ ಹರಿಯಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ತಗ್ಗು ಪ್ರದೇಶದಲ್ಲಿ ಮಳೆಯ ನೀರು ಮನೆಗಳಿಗೆ ಹರಿದು ನಾಗರಿಕರು ರಾತ್ರಿಯಿಡೀ ಜಾಗರಣೆ ಮಾಡಿ ಮಳೆಯ ನೀರು ಹೊರ ಸಾಗಿಸುವ ಕೆಲಸದಲ್ಲಿ ತೊಡಗಿದ್ದಾರೆ
ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರು ಹಾಗೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಸ್ಥಳೀಯ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ
ಮತ್ತೊಂದೆಡೆ ಆಡಳಿತರೂಢ ಬಿಜೆಪಿ ಪಕ್ಷದ ನಗರಸಭಾ ಸದಸ್ಯರೊಬ್ಬರು ಚರಂಡಿಗಳ ಅವ್ಯವಸ್ಥೆಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮಳೆನೀರು ಸರಾಗವಾಗಿ ಚರಂಡಿಯಲ್ಲಿ ಹರಿಯಲು ಕ್ರಮ ಕೈಗೊಳ್ಳಬೇಕೆಂದು ನಗರಸಭೆಯ ಅಧ್ಯಕ್ಷರು ಮತ್ತು ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸ್ವತಃ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಟ್ಟಿದ್ದಾರೆ ಒಟ್ಟಾರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಜನರ ಬದುಕು ಡೋಲಾಯಮಾನವಾಗಿದೆ.
ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಮಳೆಯ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.