Advertisement

ಚಿಕ್ಕಮಗಳೂರಿನಲ್ಲಿ ಮುಂದುವರೆದ ಮಳೆಯ ಆರ್ಭಟ: ತುಂಬಿ ಹರಿಯುತ್ತಿರುವ ನದಿಗಳು

11:23 AM Jul 22, 2021 | Team Udayavani |

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿದೆ. ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್. ಆರ್.ಪುರದಲ್ಲಿ ಭಾರೀ ಮಳೆಯಾಗುತ್ತಿದೆ.

Advertisement

ಚಿಕ್ಕಮಗಳೂರು, ತರೀಕೆರೆ ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಕಿಗ್ಗಾ, ಕೆರೆಕಟ್ಟೆ, ಕುದುರೆಮುಖ, ಕಳಸ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದ ತುಂಗ-ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿದೆ.

ಇದನ್ನೂ ಓದಿ:ಕೇಂದ್ರ ಹೇಳಿದಂತೆ ಕೇಳುತ್ತೇನೆ, ಶ್ರೀಗಳು ಸಹಕಾರ ನೀಡಬೇಕು: ರಾಜೀನಾಮೆ ಸುಳಿವು ನೀಡಿದ BSY

ಬುಧವಾರ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಕಳಸದ ಹೆಬ್ಬಾಳೆ ಸೇತುವೆ ಮುಳುಗುವ ಭೀತಿ ಎದುರಾಗಿದೆ. ಸೇತುವೆ ಮಟ್ಟದಿಂದ ಒಂದು ಅಡಿ ಕೆಳಗೆ ನೀರು ಹರಿಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next