ಮಣಿಪಾಲ/ಮಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದರ. ಗುರುವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹಲವಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.
ಮಂಗಳೂರು ನಗರದಲ್ಲಿ ಗುರುವಾರದಿಂದಲೇ ಉತ್ತಮ ಮಳೆಯಾಗಿದೆ. ನಗರದಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಹಲವು ಮನೆಗಳಿಗೆ ನೀರು ನುಗ್ಗಿದೆ. ಗುರುವಾರ ರಾತ್ರಿಯಿಡೀ ಕರಾವಳಿ ಭಾಗದಲ್ಲಿ ಮಳೆ ಸುರಿದಿದ್ದು, ಶುಕ್ರವಾರವೂ ಮುಂದುವರಿದಿದೆ.
ಶನಿವಾರ ಮುಂಜಾನೆಯವರೆಗಿನ 48 ತಾಸುಗಳ ಅವಧಿಯಲ್ಲಿ ರಾಜ್ಯಾದ್ಯಂತ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಇದನ್ನೂ ಓದಿ: ಮೀನುಗಾರರಿಗೆ ಬಂಪರ್ ಕೊಡುಗೆ: ಮತ್ಸ್ಯ ಸಂಪದ ಯೋಜನೆಗೆ ಪ್ರಧಾನಿ ಚಾಲನೆ
ಕರಾವಳಿಯಲ್ಲಿ ಸೆ. 11 ಮತ್ತು 12ರಂದು ರೆಡ್ ಅಲರ್ಟ್ ಹಾಗೂ ಸೆ. 13ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲಿ ಸೆ. 11, 12, 13ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು/ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸೇವೆಗೆ 1077, ದೂರವಾಣಿ ಸಂಖ್ಯೆ: 0820-2574802 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.