Advertisement
ಬಂಟ್ವಾಳ ತಾಲೂಕಿನ ಕನ್ಯಾನ, ವಿಟ್ಲ, ಕರೋಪಾಡಿ, ಕಲ್ಲಡ್ಕ, ಬಿ.ಸಿ.ರೋಡು ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಳೆಗೆ ಸಜೀಪಮೂಡ ಗ್ರಾಮದಲ್ಲಿ ಮನೆಯೊಂದು ಸಂಪೂರ್ಣ ಧರಾಶಾಹಿಗೊಂಡಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರು, ಧರ್ಮಸ್ಥಳ, ಗುರುವಾಯನಕೆರೆ, ಕರಾಯ, ಕಲ್ಲೇರಿ, ನಾರಾವಿ, ವೇಣೂರು ಸೇರಿದಂತೆ ಅನೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಪುತ್ತೂರು, ಉಪ್ಪಿನಂಗಡಿ, ಕಡಬ, ಸುಳ್ಯ, ಸುಬ್ರಹ್ಮಣ್ಯ, ಪಾಣಾಜೆ, ಸುರತ್ಕಲ್, ಉಳ್ಳಾಲ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಬಿರುಸು ಪಡೆದಿತ್ತು.
ಉಡುಪಿ ನಗರದಲ್ಲಿ ಬೆಳಗ್ಗೆಯಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಕಡೆಗಳಲ್ಲಿನ ತಗ್ಗು ಪ್ರದೇಶಗಳಲ್ಲಿ ಕೃತಕ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿದ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಹಾನಿಯಾಗಿರುವ ಕುರಿತು ಯಾವುದೇ ವರದಿಯಾಗಿಲ್ಲ. ಉಡುಪಿ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ತಾಲೂಕಿನ ವಿವಿಧ ಕಡೆಯಲ್ಲಿ ಉತ್ತಮ ಮಳೆಯಾಗಿದೆ. ಮರಳಿದ ಬೋಟ್‌ಗಳು
ಮಲ್ಪೆ : ಸಮುದ್ರ ಮಧ್ಯೆ ತೂಫಾನ್ ಉಂಟಾಗಿದ್ದರಿಂದ ಮೀನುಗಾರಿಕೆಗೆ ತೆರಳಿದ್ದ ಪಸೀìನ್, ಸಣ್ಣಟ್ರಾಲ್ ಬೋಟ್‌ಗಳು ವಾಪಸಾಗಿದ್ದು ಮಲ್ಪೆ ಬಂದರಿನಲ್ಲಿ ಲಂಗರು ಹಾಕಿವೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಕೆಲವೆಡೆಗಳಲ್ಲಿ ಗದ್ದೆಗಳು ಮುಳುಗಡೆಯಾಗಿವೆ.
ಮತ್ತೆ ನೆರೆ ಭೀತಿ ಮಳೆಯಿಂದಾಗಿ ಸೌಪರ್ಣಿಕ ನದಿ ಪಾತ್ರದ ನಾವುಂದ, ಬಡಾಕೆರೆ, ಪಡುಕೋಣೆ ಪರಿಸರದಲ್ಲಿ ಮತ್ತೆ ನೆರೆ ಭೀತಿ ಆವರಿಸಿದೆ. ವಾರಾಹಿ, ಚಕ್ರ, ಸೌಪರ್ಣಿಕಾ, ಕುಬೆj, ಸುಮನಾವತಿ ನದಿಗಳು ತುಂಬಿ ಹರಿಯುತ್ತಿದೆ.