ರೋಗಬಾಧೆ ಕಾಣಿಸಿಕೊಂಡಿದ್ದು, ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.
Advertisement
ಈರುಳ್ಳಿ ಸಸಿ ನಾಟಿ ಮಾಡಿದಾಗಿನಿಂದಲೂ ಆಗಾಗ ಸುರಿಯುವ ಜಿಟಿಜಿಟಿ ಮಳೆ, ಮೋಡ ಮುಸುಕಿದ ವಾತಾವರಣದ ಪರಿಣಾಮ ಈರುಳ್ಳಿಬೆಳೆಗೆ ಸೂರ್ಯನ ಕಿರಣಗಳೇ ತಾಗಿಲ್ಲ. ಇದರಿಂದ ಬೆಳೆಗೆ ಹೆಚ್ಚಿನ ಪ್ರಮಾಣದಲ್ಲಿ ರೋಗಬಾಧೆ ಕಾಣಿಸಿಕೊಂಡಿದೆ.
Related Articles
Advertisement
50 ಸಾವಿರ ಖರ್ಚು: ಎಕರೆಯೊಂದಕ್ಕೆ ಈರುಳಿ ಸಸಿ ನಾಟಿ ಮಾಡಲು 50 ಸಾವಿರ ರೂ. ಖರ್ಚು ತಗಲುತ್ತದೆ. ಇತ್ತ ಬೆಳೆಯೂ ಚೆನ್ನಾಗಿ ಬರುತ್ತಿಲ್ಲ, ರೋಗವೂ ಹತೋಟಿಗೆ ಬರುತ್ತಿಲ್ಲ. ಈ ಹಂತದಲ್ಲಿ ರೈತರಿಗೆ ನಷ್ಟವಾದರೆ ಆರ್ಥಿಕವಾಗಿ ಚೇತರಿಸಿಕೊಳ್ಳುವುದು ತುಂಬ ಕಷ್ಟ ಎಂದು ರಾಮಪ್ಪನ ತಾಂಡಾ ಈರುಳ್ಳಿ ಬೆಳೆಗಾರ ರಾಜು ಅಳಲು ತೋಡಿಕೊಳ್ಳುತ್ತಾರೆ.
ಅಧಿಕಾರಿಗಳಿಂದ ಸಲಹೆಈರುಳ್ಳಿ ರೋಗ ಹತೋಟಿಗೆ ಮತ್ತು ಬಿಳಿ ಚುಕ್ಕಿ ನಿಯಂತ್ರಣಕ್ಕೆ ಕ್ಲೋರೋಥಲೋನಿಲ್ ಹಾಗೂ ಮ್ಯಾಂಕಿಜಿಪ್ ಔಷಧ ಸಿಂಪಡಿಸುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ. ತಂಪು ಮತ್ತು ಮೋಡ ಕವಿದ ವಾತಾವರಣಕ್ಕೆ ಕಪ್ಪು ಭೂಮಿಯಲ್ಲಿ ಬೆಳೆದ ಈರುಳ್ಳಿಗೆ ರೋಗ ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈರುಳ್ಳಿ ಗರಿಗಳು ಹಳದಿ ಬಣ್ಣಕ್ಕೆ ತಿರುಗಿದರೆ, ಕ್ರಿಮಿಕೀಟಗಳ ನಿಯಂತ್ರಣಕ್ಕೆ ಶಿಲೀಂಧ್ರ ನಾಶಕದೊಂದಿಗೆ ಇತರೆ ಕೀಟನಾಶ ಬಳಸಬೇಕು ಎಂದು ಲಿಂಗಸುಗೂರು ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಶೇಖರ ತಿಳಿಸಿದ್ದಾರೆ. –ದೇವಪ್ಪ ರಾಠೋಡ