Advertisement

Rain: ಕೇರಳದಲ್ಲಿ ಭಾರೀ ಮಳೆ ಮುನ್ಸೂಚನೆ

07:55 PM Nov 05, 2023 | Team Udayavani |

ತಿರುವನಂತಪುರಂ: ದಕ್ಷಿಣಭಾರತದ ಭಾಗದಲ್ಲಿ ಚಂಡಮಾರುತ ಪರಿಚಲನೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲದಿನಗಳು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಎಚ್ಚರಿಕೆ ನೀಡಿದೆ. ತಮಿಳುನಾಡು ಮತ್ತು ನೆರೆಯ ಪ್ರದೇಶಗಳಲ್ಲಿ ವರದಿಯಾಗಿರುವ ಚಂಡಮಾರುತದ ಪರಿಚಲನೆ ಮುಂದಿನ ಮೂರು ದಿನಗಳಲ್ಲಿ ಪೂರ್ವ-ಮಧ್ಯ ಅರಬ್ಬೀ ಸಮುದ್ರದ ಕಡೆಗೆ ಚಲಿಸಲಿದೆ.

Advertisement

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪ್ರಭಾವ ತೀವ್ರವಾಗಿರುವ ಹಿನ್ನೆಲೆ ದಕ್ಷಿಣದ ರಾಜ್ಯಗಳಲ್ಲಿ ಮಳೆಯಾಗಲಿದ್ದು, ಕೇರಳದಲ್ಲಿ 5ರಿಂದ 8ರವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಈಗಾಗಲೇ ಪಟ್ಟಣಂತಿಟ್ಟ, ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next