ಮುಂಬೈ: ಮುಂಬೈಯಲ್ಲಿ ಧಾರಾಕಾರ ಮಳೆಯಾಗಿದ್ದು, ಇದರ ಪರಿಣಾಮ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ರಸ್ತೆಗಳಲ್ಲಿ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಅಲ್ಲದೇ ಶುಕ್ರವಾರದವರೆಗೂ ಭಾರೀ ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಜುಲೈ 05) ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ:ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಹವಾಮಾನ ಇಲಾಖೆ ಮುಂಬೈ ಮತ್ತು ಥಾಣೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಮುಂಬೈಗೆ ಐದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಭಾರೀ ಮಳೆಯಿಂದಾಗಿ ತಗ್ಗುಪ್ರದೇಶ ಜಲಾವೃತಗೊಂಡಿದ್ದು, ರೈಲು ಸಂಚಾರ ವ್ಯವಸ್ಥೆಯಲ್ಲೂ ವ್ಯತ್ಯಯ ಉಂಟಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, 24ಗಂಟೆಗಳ ಅವಧಿಯಲ್ಲಿ ಸುಮಾರು 95.81 ಮಿಲಿ ಮೀಟರ್ ಮಳೆ ಸುರಿಯಲಿದೆ ಎಂದು ತಿಳಿಸಿದ್ದಾರೆ.
ಭಾರೀ ಮಳೆಯಿಂದಾಗಿ ಮುಂಬೈನ ಸೈಯನ್ ಪ್ರದೇಶದ ಜಲಾವೃತಗೊಂಡಿದೆ. ಅದೇ ರೀತಿ ಥಾಣೆ ಮತ್ತು ನವಿ ಮುಂಬಯಿ ಪ್ರದೇಶ ಕೂಡಾ ಮಳೆಯ ಆರ್ಭಟದಿಂದ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ವಿವರಿಸಿದೆ.