Advertisement
ಹೀಗಾಗಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚುವರಿಯಾಗಿ ಶೇ.44ರಷ್ಟು ಮಳೆ ಸುರಿದಿದೆ.
Related Articles
Advertisement
ಕೆಂಗೇರಿಯಲ್ಲಿ ಅತ್ಯಧಿಕ ಮಳೆ:ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ಬೆಂಗಳೂರಿನ ಕೆಂಗೇರಿಯಲ್ಲಿ ಭಾನುವಾರ 141.5 ಮಿ.ಮೀ ಗರಿಷ್ಠ ಮಳೆ ದಾಖಲಾಗಿದೆ. ಇದು ರಾಜ್ಯದಲ್ಲೇ ಅತ್ಯಧಿಕವಾಗಿ ಸುರಿದ ಮಳೆಯಾಗಿದೆ. ರಾಜ್ಯದಲ್ಲಿ ಶೇ.44
ಹೆಚ್ಚುವರಿ ಮಳೆ
ಅ.1 ರಿಂದ 19ರ ವರೆಗೆ ಕರ್ನಾಟಕದಾದ್ಯಂತ 133 ಮೀಮೀ ಮಳೆ ಸುರಿದಿದೆ. ಈ ಅವಧಿಯಲ್ಲಿ ವಾಡಿಕೆಯಂತೆ 92 ಮೀಮೀ ಮಳೆಯಾಗಬೇಕಿತ್ತು. ಆದರೆ ವಾಡಿಕೆಗಿಂತ ಶೇ.44 ಹೆಚ್ಚುವರಿ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.58, ಉತ್ತರ ಒಳನಾಡಿನಲ್ಲಿ ಶೇ.34, ಮಲೆನಾಡು ಶೇ.46, ಕರಾವಳಿ ಶೇ.40 ಹೆಚ್ಚುವರಿ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ತಿಳಿಸಿದೆ.