Advertisement

Heavy Rain; ಬೆಳಗಾವಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

07:58 PM Jul 23, 2024 | Team Udayavani |

ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯ ನಾಲ್ಕು ತಾಲೂಕಿನಲ್ಲಿ ಜು.24 ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement

ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next