Advertisement

Heavy Rain ; ಜುಲೈ 20ರಂದೂ ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ

07:46 PM Jul 19, 2024 | Team Udayavani |

ಉಡುಪಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದ ಕಾರಣ ಶನಿವಾರ (ಜುಲೈ 20) ರಂದೂ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರೆಡ್ ಅಲರ್ಟ್ ಮತ್ತು ಭಾರೀ ಮಳೆ ಇದ್ದ ಕಾರಣ ಜಿಲ್ಲೆಯಲ್ಲಿ ಶುಕ್ರವಾರ ರಜೆ ಘೋಷಿಸಲಾಗಿತ್ತು.

Advertisement

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ವ್ಯಾಪಕ ಬೆಳ ಹಾನಿಯಾಗಿದ್ದು ರೈತರು ಮುಖ್ಯವಾಗಿ ಭತ್ತ ಬೆಳೆಗಾರರಿಗೆ ಸಮಸ್ಯೆಉಂಟಾಗಿದೆ. ಹೆಚ್ಚಿನ ಪ್ರಮಾಣದ ನೇಜಿ ನೀರು ಪಾಲಾಗಿ ರೈತರು ಪರಿತಪಿಸುವಂತಾಗಿದೆ. ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next