Advertisement
ಕಾರವಾರದಲ್ಲಿ ಅತ್ಯಂತ ಬಿರುಸಿನ ಮಳೆ ಬರುತ್ತಿದ್ದು, ಮುರುಳೀಧರ ಮಠ ರಸ್ತೆಯಲ್ಲಿ ಮರವೊಂದು ವಿದ್ಯುತ್ ಕಂಬದ ಮೇಲೆ ಉರುಳಿದೆ. ತಗ್ಗು ಪ್ರದೇಶಗಳಲ್ಲಿ ಹಾಗೂ ಕೆಲ ಅಪಾರ್ಟ್ಮೆಂಟ್ ವಾಹನ ಪಾರ್ಕಿಂಗ್ ಏರಿಯಾ ಜಲಾವೃತವಾಗಿವೆ.
ಜಿಲ್ಲೆಯಲ್ಲಿ ಜು.5 ರಂದು ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ
ಪ್ರಕೃತಿ ವಿಕೋಪ ನಿರ್ವಹಣಾ ತಂಡಗಳನ್ನು ಸನ್ನದ್ದ ಸ್ಥಿತಿಯಲ್ಲಿ ಇಡಲಾಗಿದೆ. ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜನರು ವಿದ್ಯುತ್ ಕಂಬ ,ಮರಗಳ ಹತ್ತಿರ. ನಿಲ್ಲದಂತೆ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶದ ಜನರ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವಾಸಿಗರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಜು. 7 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ . ಪ್ರವಾಹ ನಿರ್ವಹಣೆಗೆ ನೇಮಿಸಲಾದ ಅಧಿಕಾರಗಳು ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.