Advertisement

ಮುಂದುವರಿದ ಮಳೆ: ಧಾರವಾಡ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

08:19 AM May 20, 2022 | Team Udayavani |

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ, ಕಾಲೇಜುಗಳಿಗೆ ಇಂದು (ಮೇ.20) ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

Advertisement

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ. ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮಳೆಗಾಲ: ಅವಘಡ ಸಂಭವಿಸದಂತೆ ಎಚ್ಚರ ವಹಿಸಿ

ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲೂ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next