ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಚಿತ್ತಾಪುರ, ಸೇಡಂ ಹಾಗೂ ಚಿಂಚೋಳಿ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಹಲವು ಶಾಲೆಗಳು ಸೋರುತ್ತಿದ್ದು ಮೇಲ್ಚಾವಣಿ ಕುಸಿಯುವ ಅಪಾಯಕ್ಕೆ ತಲುಪಿವೆ. ಆದ್ದರಿಂದ ಆಯಾ ತಾಲೂಕಿನ ಬಿಇಒಗಳು ಶಾಲಾ ವೀಕ್ಷಣೆ ಮಾಡಿ ತುರ್ತು ನಿರ್ಧಾರ ಕೈಗೊಳ್ಳಲು ಸರ್ಕಾರ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ಮೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಉಳಿದ ತಾಲೂಕುಗಳಲ್ಲಿನ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಅಲ್ಲಿಯ ಬಿಇಓ ಗಳು ಕ್ರಮ ಕೈಗೊಳ್ಳಬಹುದು. ಆದರೆ, ಇಲ್ಲಿಯವರೆಗೆ ಯಾವುದೇ ಅಪಾಯ ಸಂಭವಿಸಿಲ್ಲ. ಮುಂಜಾಗ್ರತ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:Gruha Laxmi Scheme: ದಾವಣಗೆರೆಯಲ್ಲಿ ಮೊದಲ ದಿನವೇ ಮಹಿಳೆಯರಿಂದ ಪ್ರತಿರೋಧ
ಹವಾಮಾನ ಇಲಾಖೆಯ ಪ್ರಕಾರ ಇನ್ನು 2 ರಿಂದ 3 ದಿನಗಳ ಕಾಲ ಸತತವಾಗಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ, ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಅವರು “ಉದಯವಾಣಿ”ಗೆ ತಿಳಿಸಿದ್ದಾರೆ.