ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು, ಹವಾಮಾನ ಇಲಾಖೆ ಮೊದಲೇ ನೀಡಿತ್ತು .ಮಳೆ ಜು.7 ರ ತನಕ ಮುಂದುವರಿಯಲಿದೆ. ಶಾಲಾ ಮಕ್ಕಳ ಹಾಗೂ ಪಿಯು, ಪದವಿ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಮಂಗಳವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈ ಸಂಬಂಧ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ತಿಳಿಸಿದ್ದಾರೆ.
ಇದನ್ನೂ ಓದಿ:ಇಡಿ ಬಳಿಕ ಎಸಿಬಿ ಶಾಕ್: ಜಮೀರ್ ಅಹಮದ್ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
ಗಂಗಾವಳಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ. ಹಳವಳ್ಳಿ,ಹೆಗ್ಗಾರ, ಡೊಂಗ್ರಿ ರಾಷ್ಟ್ರೀಯ ಹೆದ್ದಾರಿ 66 ರಿಂದ ಸಂಪರ್ಕ ಕಡಿದುಕೊಂಡಿವೆ.
Related Articles
ಕದ್ರಾ, ಮುದಗಾದಲ್ಲಿ ನೀರು ರಸ್ತೆ ದಾಟಿ ಮನೆಯಂಗಳಕ್ಕೆ ಬಂದಿದೆ. ಜಿಲ್ಲಾಡಳಿತ ಜನರ ರಕ್ಷಣೆಗೆ ಮುಂದಾಗಲು ಸಿದ್ಧತೆ ಮಾಡಿಕೊಂಡಿದೆ.