Advertisement

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

08:09 PM Jul 07, 2024 | Team Udayavani |

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ಮತ್ತು ಕಾರವಾರ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು(ಸೋಮವಾರ) ಜಿಲ್ಲಾಡಳಿತ ರಜೆ ಘೋಷಿಸಿದೆ.

Advertisement

ಮುಂಜಾಗೃತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಭಾನುವಾರ ಸಂಜೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಸೋಮವಾರವೂ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next