Advertisement
ನಾವೂರು ಗ್ರಾಮದ ಕೈಕಂಬ ಸೇತುವೆ ಶಿಥಿಲಾವಸ್ಥೆಯಲ್ಲಿರುವ ಕಾರಣ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ. ಚಿಕ್ಕಮಗಳೂರು ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಬಿರುಕು ಬಿಟ್ಟಿದೆ. ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುರಾತನ ಅಶ್ವತ್ಥಮರ ಧರೆಗುರುಳಿದೆ.
ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜು.8ರಂದು ಆರೆಂಜ್ ಅಲರ್ಟ್, ಜು.9ರಂದು ಎಲ್ಲೋ ಅಲರ್ಟ್ ಮತ್ತು ಜು.10 ಮತ್ತು 11ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Related Articles
ಉಡುಪಿ ಜಿಲ್ಲೆಯಲ್ಲಿ ರವಿವಾರವೂ ಹಲವೆಡೆ ಉತ್ತಮ ಮಳೆಯಾಗಿದೆ. ಕುಂದಾಪುರ ಭಾಗದಲ್ಲಿ ದಿನವಿಡೀ ಧಾರಾಕಾರ ಮಳೆ ಸುರಿದಿದೆ.
Advertisement
ಕಾರ್ಕಳ, ಹೆಬ್ರಿ, ಉಡುಪಿ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಕಾಪು, ಬ್ರಹ್ಮಾವರ ಸುತ್ತಮುತ್ತ ಬಿಸಿಲು – ಮೋಡ ಕವಿದ ವಾತಾವರಣದ ನಡುವೆ ಉತ್ತಮ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗಿದೆ.
ಚಾರ್ಮಾಡಿ : ಗುಡ್ಡ ಕುಸಿತ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ರವಿವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು – ದ.ಕ.ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರು ತಾಲೂಕು ಶಾಲೆ, ಕಾಲೇಜಿಗೆ ರಜೆ
ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಅಂಗನವಾಡಿಯಿಂದ ಪಿಯುಸಿ ವರೆಗಿನ ಮಕ್ಕಳಿಗೆ ಸೋಮವಾರ ರಜೆ ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ.