ಬೆಂಗಳೂರು: ಮುಂಗಾರು ಪ್ರವೇಶಕ್ಕೂ ಮುನ್ನ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಹಲವು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಗುರುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿ ಹೋಗಿದ್ದು, 85 ಕ್ಕೂ ಹೆಚ್ಚು ಮರಗಳು ಮತ್ತು 90 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬೆಂಗಳೂರು ದಕ್ಷಿಣದ ಬಸವನಗುಡಿ, ಗಿರಿನಗರದಲ್ಲಿ ಹಲವು ಮರಗಳು ಧರೆಗೆ ಉರುಳಿವೆ.ಹನುಮಂತನಗರದಲ್ಲಿ ಬೃಹತ್ ಮರಗಳೆರಡು ಮನೆಯ ಮೇಲೆ ಉರುಳಿದೆ.
ಮರಗಳು ಬಿದ್ದು ಹಲವು ವಾಹನಗಳು ಜಖಂಗೊಂಡಿವೆ.
ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು , ಸಾರ್ವಜನಿಕರು ಪರದಾಡಬೇಕಾಗಿದೆ. ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನೆಲಮಂಗಲದಲ್ಲಿ ಬಿರುಗಾಳಿ ಮಳೆಗೆ ಅಪಾರ ತೋಟ ಹಾನಿಯಾಗಿದೆ.