Advertisement

ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ

11:31 AM Jun 19, 2021 | Team Udayavani |

ಬೆಳಗಾವಿ:  ಜಿಲ್ಲೆಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ಹಾಗೂ ಹಿಡಕಲ್ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

Advertisement

ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ತಾಲೂಕಿನ ಹಬ್ಬಾನಟ್ಟಿ ಬಳಿ ಇರುವ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.

ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಮಲಪ್ರಭಾ ಜಲಾಶಯದ ನೀರಿನ ಮಟ್ಟದಲ್ಲಿ ಮೂರು ಅಡಿಗಳಷ್ಟು ಏರಿಕೆಯಾಗಿದೆ‌. ಜಲಾಶಯಕ್ಕೆ ಈಗ 17 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಟ್ಟು 2079 ಅಡಿ ಸಾಮಥ್ರ್ಯದ ಸಾಮರ್ಥ್ಯದ ಜಲಾಶಯದಲ್ಲಿ ಈಗ 2053 ಅಡಿ ನೀರು ಸಂಗ್ರಹವಾಗಿದೆ.

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬರಲಾರಂಭಿಸಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಅಂಕಿ ಅಂಶಗಳ ಪ್ರಕಾರ ನದಿಗೆ 39 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಇದರಿಂದಾಗಿ ಹಿಡಕಲ್ ಜಲಾಶಯದಲ್ಲಿ ಒಂದೇ ದಿನದಲ್ಲಿ 10 ಅಡಿಗಳಷ್ಟು ಏರಿಕೆಯಾಗಿದೆ.  ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2111 ಅಡಿ ನೀರು ಸಂಗ್ರಹವಾಗಿದೆ. ನೀರಿನ ಮಟ್ಟದಲ್ಲಿ ಒಂದೇ ಸಮನೆ ಏರಿಕೆಯಾಗುತ್ತಿರುವದರಿಂದ ನದಿ ಪಾತ್ರದ ಹಳ್ಳಿಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ

Advertisement

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಕೃಷ್ಣಾ, ವೇದಗಂಗಾ ಹಾಗೂ ದೂಧ್ ಗಂಗಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.  ಇದರಿಂದಾಗಿ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಏಳು ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರ ಭಾಗದಿಂದ ಕೃಷ್ಣಾ ನದಿಗೆ ಈಗ 1.18 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next