Advertisement

Rain: ಭಾರಿ ಮಳೆ… ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು (ಜುಲೈ 30) ಶಾಲೆಗಳಿಗೆ ರಜೆ ಘೋಷಣೆ

08:40 AM Jul 30, 2024 | Team Udayavani |

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಕಳೆದ ರಾತ್ರಿಯಿಂದ ನಿರಂತೆ ಮಳೆಯಾಗುತ್ತಿರುವ ಪರಿಣಾಮ ನೇತ್ರಾವತಿ, ಮೃತ್ಯುಂಜಯ ನದಿಗಳು ಉಕ್ಕಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಮರ ಉರುಳಿದ್ದರಿಂದ ಸಂಚಾರಕ್ಕೆ ತಡೆಯಾಗಿದೆ.

Advertisement

ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮರ ಉರುಳಿದ್ದು, ರಸ್ತೆ ತಡೆಯಾಗಿದೆ. ಮಳೆಗಾಲದ ಮುನ್ನ ಅಪಾಯಕಾರಿ ಮರ ತೆರವು ಮಾಡದೆ ಇಲಾಖೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಪರದಾಡುವಂತಾಗಿದೆ. ಈ ವಿಚಾರವಾಗಿ ಸಾರ್ವಜನಿಕ ವಲಯದಿಂದ ಇಲಾಖೆ ಬೇಜವಾಬ್ದಾರಿತನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ನದಿ ಸಮೀಪದ ತೋಟಗಳಿಗೆ ನೀರು ನುಗ್ಗಿದೆ. ತೀರ ಗ್ರಾಮಾಂತರ ಸರಕಾರಿ ಶಾಲೆಗಳಲ್ಲಿ ಸ್ವಯಂಪ್ರೇರಿತವಾಗಿ ರಜೆ ನೀಡಲಾಗಿದೆ. ಅಪಾಯದ ಮಟ್ಟ ಮೀರಿ ನದಿ ನೀರು ಹೆಚ್ಚಳವಾಗುತ್ತಿರುವುದರಿಂದ ನೆರೆ ಸಂಭವ ಸಾಧ್ಯತೆ ಎದುರಾಗಿದೆ.

ಈಗಾಗಲೆ ಮೃತ್ಯುಂಜಯ ಹಾಗೂ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಿಂದ ಧರ್ಮಸ್ಥಳ ಸಮೀಪದ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಮುಂಭಾಗ ಸಂಗಮವಾಗಿದೆ.

Advertisement

ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು(ಮಂಗಳವಾರ) ರಜೆ ನೀಡಲಾಗಿದೆ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಮ್ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಆದರೆ ಮಳೆ ರಾತ್ರಿಯಿಂದಲೇ ಸುರಿಯುತ್ತಿದ್ದರೂ ತಹಶೀಲ್ದಾರ್ ತಡವಾಗಿ ರಜೆ ನಿರ್ಧಾರ ತೆಗೆದಿದ್ದು, ಬಹುತೇಕ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಕರು, ಮಕ್ಕಳು ಶಾಲೆಗೆ ತೆರಳುವ ಮಾರ್ಗದಲ್ಲಿದ್ದುದರಿಂದ ಮತ್ತಷ್ಟು ಸಮಸ್ಯೆ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next