Advertisement

ಚಿಕ್ಕಮಗಳೂರು: ಮಹಾಮಳೆಗೆ ಮೊದಲ ಬಲಿ, ಮೂಡಿಗೆರೆ-ಮಂಗಳೂರು ಸಂಚಾರ ಬಂದ್

03:52 PM Aug 06, 2020 | keerthan |

ಚಿಕ್ಕಮಗಳೂರು: ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಮಹಾಮಳೆಯ ಕಾರಣ ನದಿಗಳು ತುಂಬಿ ಹರಿಯುತ್ತಿದ್ದು, ಗಾಳಿ ಮಳೆಗೆ ಹಲವಡೆ ವಿದ್ಯುತ್ ಕಂಬಗಳು ಧರೆಗುರುಳಿದೆ. ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತುಳಿದು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Advertisement

ಕಡೂರು ತಾಲ್ಲೂಕು ಜಕ್ಕನಹಳ್ಳಿ ಗ್ರಾಮದ ಪರಮೇಶ್ವರಪ್ಪ (38) ಎಂಬವರು ಸಾವನಪ್ಪಿದ್ದಾರೆ. ಭಾರಿ ಗಾಳಿ-ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನಪ್ಪಿದ್ದಾರೆ.

ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿಯು ಮೈದುಂಬಿ ಹರಿಯುತ್ತಿದೆ. ಶೃಂಗೇರಿಯ ಪ್ರವಾಸಿಗರ ವಾಹನ ನಿಲುಗಡೆಯ ಗಾಂಧಿ ಮೈದಾನ ಜಲಾವೃತವಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿದೆ.

ಭಾರಿ ಮಳೆಯಿಂದಾಗಿ ಮಲ್ಗೋಡ್ ಸೇತುವೆ ಜಲಾವೃತವಾಗಿದ್ದು, ಬಾಳೆಹೊನ್ನೂರು-ಕಳಸ ಸಂಚಾರ ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 173 ಬಂದ್ ಆಗಿದ್ದು, ಮೂಡಿಗೆರೆ-ಮಂಗಳೂರು ಸಂಚಾರ ಸ್ಥಗಿತವಾಗಿದೆ. ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ.

ಭಾರಿ ಗಾಳಿ ಮಳೆಯ ಕಾರಣ ಶೃಂಗೇರಿ ತಾಲೂಕಿನ ಸಂಕ್ಲಾಪುರದಲ್ಲಿ ಬಿದ್ದ ಬೃಹತ್ ಮರವೊಂದು ಮನೆ ಮೇಲೆ ಉರುಳಿ ಬಿದ್ದಿದೆ. ನಾಗೇಶ್ ಗೌಡ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಮರ ಬಿದ್ದ ಹಿನ್ನೆಲೆ ಮನೆ ಸಂಪೂರ್ಣ ಧ್ವಂಸವಾಗಿದೆ.

Advertisement

ಕುಸಿದ ಹೆದ್ದಾರಿ:  ಭಾರಿ ಮಳೆಗೆ  ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕಿನ ಜಲದುರ್ಗ ಬಳಿ ರಾಜ್ಯ ಹೆದ್ದಾರಿ 17ರ ರಸ್ತೆ ಕುಸಿದಿದೆ. ಇದರಿಂದ ಬಾಳೆಹೊನ್ನೂರು-ಕೊಪ್ಪ ಸಂಪರ್ಕಿಸುವ ರಸ್ತೆ ಬಂದ್ ಆಗಿದ್ದು,  ಕೊಪ್ಪ, ಶೃಂಗೇರಿ, ಎನ್ಆರ್ ಪುರ ಭಾಗದ ಬಹುತೇಕ ರಸ್ತೆಗಳು ಬಂದ್ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next