Advertisement

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

12:30 AM Jul 07, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಭಾಗದಲ್ಲಿ ಬೀಸಿದ ಬಿರುಗಾಳಿಯ ಪರಿಣಾಮ ಅಂಗಡಿ ಮುಂಗಟ್ಟುಗಳ ಮೇಲ್ಛಾವಣಿಯ ಶೀಟ್‌ಗಳು ಹಾರಿ ಹೋಗಿದೆ.

Advertisement

ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಕಾಶಿಬೆಟ್ಟಿನಲ್ಲಿ ಕೆಸರುಮಯ ರಸ್ತೆಯಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿ ತಾಸುಗಟ್ಟಲೆ ಸಂಚಾರ ತಡೆ ಉಂಟಾಯಿತು.

ಮಂಗಳೂರು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನವರೆಗೆ ಬಿರುಸಿನ ಮಳೆಯಾಗಿದ್ದು, ಬಳಿಕ ಮಳೆಯ ತೀವ್ರತೆ ತುಸು ಕಡಿಮೆಯಾಗಿತ್ತು.
ಮೂರು ದಿನ “ಆರೆಂಜ್‌ ಅಲರ್ಟ್‌’

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಜು.7ರಿಂದ 9ರ ವರೆಗೆ ಕರಾವಳಿ ಭಾಗದಲ್ಲಿ “ಎಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಬಿರುಸಿನ ಮಳೆ, ಗಾಳಿ ಬೀಸುವ ಸಾಧ್ಯತೆ ಇದೆ.

ನೀರಿಗಿಳಿಯದಂತೆ ಜಿಲ್ಲಾ ಧಿಕಾರಿ ಆದೇಶ
ಮುಂಗಾರು ಅವ ಧಿಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನಚ್ಚರಿಕೆ ವಹಿಸಬೇಕಾಗಿರುವುದರಿಂದ ಜಿಲ್ಲಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂ ಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಮುಲ್ಲೆ ç ಮುಗಿಲನ್‌ ಅದೇಶಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next