ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯ ಅಬ್ಬರ ಜೋರಾಗಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನವದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಮುಂಜಾನೆಯಿಂದಲೇ ಗಾಜಿಯಾಬಾದ್ ಹಾಗೂ ನೋಯ್ಡಾ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು ಕೆಲವೊಂದು ಕಡೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ದೆಹಲಿಯ ಸುತ್ತಮುತ್ತಲ ಪ್ರದೇಶವಾದ ಸಂಭಾಲ್, ಗುಲಾತಿ, ಸಿಯಾನಾ, ಬುಲಂದ್‌ಶಹರ್, ಖುರ್ಜಾ, ಕೊಸ್ಲಿ, ಬಾವಲ್, ನುಹ್, ಸೊಹ್ನಾ, ಪಲ್ವಾಲ್, ಹೋಡಾಲ್, ಫರಿದಾಬಾದ್, ಗುರುಗ್ರಾಮ್, ಮನೇಸರ್, ಬಲ್ಲಾಭಾರ್ಗ್, ಫರಿದಾಬಾದ್ ಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ.
ಭಾರಿ ಮಳೆಗೆ ದೆಹಲಿಯ ಸಂಚಾರಿ ಪೊಲೀಸರು ಕೆಲವೊಂದು ಭಾಗಗಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದೆ.
ಮುಂದಿನ 24 ಗಂಟೆಗಳಲ್ಲಿ ಒಡಿಶಾ, ಕರಾವಳಿ ಆಂಧ್ರಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳಗಳಲ್ಲಿ ಬೆಳಕಿನಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.