ನವದೆಹಲಿ: ಶನಿವಾರ ಬೆಳಿಗ್ಗೆ ದೆಹಲಿಯ ಸುತ್ತ ಮುತ್ತಲ ಪ್ರದೇಶದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇದರಿಂದ ಕಳೆದ ಕೆಲವು ತಿಂಗಳುಗಳಿಂದ ಬಿಸಿಲಿನ ಬೇಗೆಯಿಂದ ಬೆಂದಿದ್ದ ದೆಹಲಿಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ರಾಷ್ಟ್ರ ರಾಜಧಾನಿ ಸೇರಿದಂತೆ ನೋಯ್ಡಾ ಮತ್ತು ಗಾಜಿಯಾಬಾದ್ ಹಾಗೂ ಸಮೀಪದ ಸುತ್ತಮುತ್ತ ಪ್ರದೇಶಗಳಿಗೆ ಇಂದು ಬೆಳಿಗ್ಗೆ ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ನೀಡಲಾಗಿತ್ತು. ಮಂಗಳವಾರದವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದೆಹಲಿ-ಎನ್‌ಸಿಆರ್ ನಲ್ಲಿ ಗಂಟೆಗೆ 40-70 ಕಿಮೀ ವೇಗದಲ್ಲಿ ಬಿರುಗಾಳಿ ಬಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ವಿಮಾನ ಹಾರಾಟದಲ್ಲಿ ವ್ಯತ್ಯಯ:
ಹವಾಮಾನ ವೈಪರೀತ್ಯದಿಂದಾಗಿ ದಿಲ್ಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಿಮಾನಗಳ ಹಾರಾಟದಲ್ಲಿ ತೊಂದರೆಯಾಗಲಿದ್ದು ಪ್ರಯಾಣಿಕರು ಸಹಕರಿಸುವಂತೆ ವಿಮಾನಯಾನ ಸಂಸ್ಥೆ ಟ್ವೀಟ್ ಮಾಡಿದೆ ಅಲ್ಲದೆ ವಿಮಾನಗಳ ಹಾರಾಟದ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸುವಂತೆ ಕೇಳಿಕೊಂಡಿದೆ.
Related Articles
ಇದನ್ನೂ ಓದಿ: Tollywood ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ವಿಧಿವಶ