Advertisement

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

11:02 PM Apr 16, 2024 | Team Udayavani |

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿದ ಕಾರಣ 3 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ ಒಟ್ಟು 112 ರಸ್ತೆಗಳು ಬಂದ್‌ ಆಗಿವೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

Advertisement

ರಾಜ್ಯದ ಹಲವು ಭಾಗಗಳಲ್ಲಿ ಮಂಗಳವಾರ ಮಳೆ ಸುರಿದಿದೆ. ಕೆಲವು ಕಡೆಗಳಲ್ಲಿ ಹಿಮಪಾತವಾಗಿದೆ. ಕೊಥಿ ಪ್ರದೇಶದಲ್ಲಿ ಅತ್ಯಧಿಕ 63 ಮಿ.ಮಿ. ಮಳೆಯಾಗಿದೆ.

ಹವಾಮಾನ ಇಲಾಖೆಯು ರಾಜ್ಯದಲ್ಲಿ ಆರೇಂಜ್‌ ಅಲರ್ಟ್‌ ಘೋಷಿಸಿದೆ. ಶುಕ್ರವಾರದಂದು ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಬೀಳಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ ಹವಾಮನಾ ಇಲಾಖೆ ಎಚ್ಚರಿಕೆ ನೀಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next