Advertisement

8 ಸಾವಿರ ಜನ ನಿರಾಶ್ರಿತರು

05:03 PM Oct 16, 2020 | Suhan S |

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ  ಮಳೆಯಿಂದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಎರಡು ದಿನದಲ್ಲಿ ಎಂಟು ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಇದೀಗ ಮಹಾರಾಷ್ಟ್ರದಿಂದ ಭೀಮ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಟ್ಟೆ-ಬರೆ ಬಿಟ್ಟು ಊರುಗಳನ್ನು ತೊರೆಯುವ ಪರಿಸ್ಥಿತಿ ಎದುರಾಗಿದೆ.

Advertisement

ಮುಂಗಾರು ಆರಂಭದಿಂದಲೂ ಮಳೆರಾಯ ಅಬ್ಬರಿಸುತ್ತಿದ್ದು, ಮಂಗಳವಾರ ರಾತ್ರಿ ಸುರಿದ ಒಂದೇ ಒಂದು ಮಳೆಗೆ ಗ್ರಾಮೀಣ ಜನರ ಬದುಕು ನೀರು ಪಾಲಾಗಿದೆ. ಗುರುವಾರ ಮಳೆ ಸ್ವಲ್ಪ ಬಿಡುವು ಕೊಟ್ಟಿದೆ ಎಂದು ನಮ್ಮೆದಿಯ ನಿಟ್ಟುನಿರು ಬಿಡುವಷ್ಟರಲ್ಲೇ “ಮಹಾ’ ನೀರಿನಿಂದಾಗಿ ಅತಂತ್ರರಾಗುವಂತೆ ಮಾಡಿದೆ.

ಅಫಲಜಪುರ ತಾಲೂಕಿನ ಸೊನ್ನ ಬ್ಯಾರೇಜ್‌ ಗೆ ದಾಖಲೆ ಪ್ರಮಾಣ ನೀರು ಹರಿದು ಬರುತ್ತಿದ್ದು, ನದಿ ಪಾತ್ರಗಳಲ್ಲಿ ಬರುವ ಜೇವರ್ಗಿ, ಚಿತ್ತಾಪುರ, ಅಫಜಲಪುರ, ಕಲಬುರಗಿ ಮತ್ತು ಸೇಡಂ ತಾಲೂಕಿನ 148 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಆಯಾ ಗ್ರಾಮಗಳ ನದಿ ಪಾತ್ರಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ರಸ್ತೆ ಸಂಪರ್ಕ ಬಂದ್‌: ಭೀಮ ನದಿಗೆ ಅಡ್ಡಲಾಗಿರುವ ಘತ್ತಗರಿ, ದೇವಲಗಾಣಗಾಪುರ, ಚಿನಮಳ್ಳಿ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ.ಅಪಾಯ ಮಟ್ಟ ಮೀರಿ ನದಿ ಹರಿಯುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮೇಲೆ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸದ್ಯಕ್ಕೆ ಪರ್ಯಾಯವಾಗಿಕೋನಹಿಪ್ಪರಗ ಮತ್ತು ಸರಡಗಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಕಲಬುರಗಿ-ಸೇಡಂ, ಚಿತ್ತಾಪುರ-ಕಲಬುರಗಿ, ಶಹಾಬಾದ-ಕಲಬುರಗಿ, ಶಹಬಾದ-ಚಿತ್ತಾಪುರಸಂಪರ್ಕಗಳ ಸಹ ಸಂಪೂರ್ಣ ಕಡಿತಗೊಂಡಿವೆ.ಇದರಿಂದ ಪ್ರಯಾಣಿಕರು ಸಹ ಪರದಾಡುವಂತೆ ಆಗಿದೆ. ಇತ್ತ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ದೂರವಾಣಿಯೊಂದಿಗೆ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜಿಲ್ಲಾಧಿಕಾರಿಗಳು ಸಹ ಸ್ಥಳೀಯ ಅಧಿಕಾರಿಗಳ ಸಭೆ ನಡೆಸಿ ಜನರಿಗೆ ತೊಂದರೆ ಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಜನರ ರಕ್ಷಣೆಗೆ ಆದ್ಯತೆ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಯೇ ಜಿಲ್ಲಾಡಳಿತದ ಪ್ರಥಮ ಆದ್ಯತೆ ಆಗಿದೆ. ಮುಂದಿನ ಎರಡು ದಿನಗಳಲಿಯೂ ಜಿಲ್ಲೆಯಲ್ಲಿಹೆಚ್ಚಿನ ಮಳೆಯಾಗುವ ಕುರಿತು ಹವಾಮಾನ ಇಲಾಖೆರೆಡ್‌ ಅಲರ್ಟ್‌ ಘೋಷಿಸಿದೆ. ಹೀಗಾಗಿ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗೆ ಎರಡು ಎನ್‌ಡಿಆರ್‌ ಎಫ್‌ ತಂಡಗಳನ್ನು ಜಿಲ್ಲೆಗೆ ಕರೆಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ತಿಳಿಸಿದ್ದಾರೆ.

Advertisement

ಕಳೆದ ಎರಡು ದಿನದಲ್ಲಿ ಜಿಲ್ಲಾದ್ಯಂತ ಪ್ರವಾಹದಲ್ಲಿ ಸಿಲುಕಿದ 150ಕ್ಕಿಂತ ಹೆಚ್ಚಿನ ಜನರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಎನ್‌ಡಿಆರ್‌ಎಫ್‌ ತಂಡದೊಂದಿಗೆ ಪೊಲೀಸ್‌, ಕಂದಾಯ, ಅಗ್ನಿಶಾಮಕ ತಂಡಗಳು ಈಗಾಗಲೇ ಬಿಡಾರ ಹೂಡಿವೆ. ನಿರಾಶ್ರಿತರಿಗೆ ಆಶ್ರಯ ಕಲ್ಪಿಸಲು ಜಿಲ್ಲಾದ್ಯಂತ 50ಕ್ಕೂ ಹೆಚ್ಚು ಕಾಳಜಿ ಕೇಂದ್ರ ತೆರೆಯಲಾಗಿದೆ. ಎಂಟು ಸಾವಿರಕ್ಕೂ ಹೆಚ್ಚಿನ ನಿರಾಶ್ರಿತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next