Advertisement

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

08:13 AM Oct 13, 2021 | Girisha |

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Advertisement

ರಾಜ್ಯದ 18 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರ ವರೆಗೂ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರಿನಲ್ಲಿ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next