Advertisement

ಕೊಪ್ಪಳ, ಗದಗದಲ್ಲಿ ನಿರಂತರ ಮಳೆ: ಅಂಗನವಾಡಿ, ಶಾಲೆಗಳಿಗೆ ಇಂದು ರಜೆ

01:04 PM May 20, 2022 | Team Udayavani |

ಗದಗ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಅಂಗನವಾಡಿ ಹಾಗೂ ಎಲ್ಲ ಶಾಲೆಗಳಿಗೆ ಮೇ20 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ ಸುಂದರೇಶ ಬಾಬು ಆದೇಶಿಸಿದ್ದಾರೆ.

Advertisement

ಬುಧವಾರ ರಾತ್ರಿ ಹಾಗೂ ಗುರುವಾರ ಇಡೀ ದಿನ ಮಳೆಯಾಗಿದೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಪ್ಪಳ: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಇಂದೂ ಕೂಡ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೊಪ್ಪಳ ಡಿಸಿ ವಿಕಾಸ ಕಿಶೋರ್ ಅವರು ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಮಳೆಯಿಂದ ಮಲೆನಾಡಿನಂತಾಗಿದೆ. ಹಲವು ಭಾಗದಲ್ಲಿ ಶಾಲೆಗಳಿಗೆ ಮಳೆಯ ನೀರು ನುಗ್ಗಿದೆ. ಶಾಲಾ ಅವರಣ ಕೆರೆಯ ಅಂಗಳದಂತಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಪ್ಪಳ ಡಿಸಿ ವಿಕಾಸ್ ಕಿಶೋರ್ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Advertisement

ತುಂಗಭದ್ರಾ ಜಲಾಶಯ ನೀರಿನ‌ಮಟ್ಟ(20-5-2021)

ಗರಿಷ್ಠ ನೀರಿನ ಮಟ್ಟ: 1,633 ಅಡಿ
ಇಂದಿನ ಮಟ್ಟ: 1595.38 ಅಡಿ
ಒಟ್ಟು ಸಾಮರ್ಥ್ಯ: 100.86 ಟಿಎಂಸಿ
ಇಂದಿನ ನೀರಿನ ಮಟ್ಟ: 14.51 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ: 6.64 ಟಿಎಂಸಿ
ಇಂದಿನ ಒಳಹರಿವು: 16040 ಕ್ಯೂಸೆಕ್
ಇಂದಿನ ಹೊರಹರಿವು: 149 ಕ್ಯೂಸೆಕ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next