Advertisement

Rain: ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ.. ಮುಳುಗುವ ಹಂತದಲ್ಲಿ ಹೆಬ್ಬಾಳೆ ಸೇತುವೆ

01:36 PM Jun 27, 2024 | Team Udayavani |

ಚಿಕ್ಕಮಗಳೂರು: ಕಾಫಿನಾಡು ಸೇರಿದಂತೆ ಕುದುರೆಮುಖ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಭದ್ರಾ ನದಿಯಲ್ಲಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದ್ದು ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತಕ್ಕೆ ತಲುಪಿದೆ.

Advertisement

ಮಳೆಯ ಪರಿಣಾಮ ಹೆಬ್ಬಾಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಸೇತುವೆ ಮುಳುಗಡೆಗೆ ಇನ್ನು 4-5 ಅಡಿಯಷ್ಟೇ ಬಾಕಿ ಇದೆ ಎನ್ನಲಾಗಿದೆ. ಒಂದು ವೇಳೆ ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಸಂಪರ್ಕ ಕಡಿತಗೊಳ್ಳಲಿದೆ ಜೊತೆಗೆ ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ ಎನ್ನಲಾಗಿದೆ.

ಶೃಂಗೇರಿ ತಾಲೂಕಿನ ಕೆರೆಕಟ್ಟೆ ಭಾಗದಲ್ಲೂ ಭಾರೀ ಮಳೆಯಾಗುತ್ತಿದ್ದು ತುಂಗಾ ನದಿಯ ಒಳ ಹರಿವಿನ ಪ್ರಮಾಣದಲ್ಲೂ ಏರಿಕೆಯಾಗಿದೆ, ನಿರಂತರ ಮಳೆಯಿಂದ ನಾಡಿನ ಜೀವನದಿಗಳ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಇದನ್ನೂ ಓದಿ: Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

Advertisement

Udayavani is now on Telegram. Click here to join our channel and stay updated with the latest news.

Next