Advertisement

ಧಾರಾಕಾರ ಮಳೆ: ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದ ಪ್ರವಾಹದ ನೀರು

03:02 PM Jul 18, 2024 | Team Udayavani |

ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ.

Advertisement

ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಆರು ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಎತ್ತರ ಪ್ರದೇಶ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮ ಪಂಚಾಯಿತಿ ಈಗಾಗಲೇ ಸೂಚನೆ ನೀಡಿದೆ.

ಇದನ್ನೂ ಓದಿ: Shiradi Ghat ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next