Advertisement
ಉಡುಪಿ, ಕಾರ್ಕಳ, ಮಂಗಳೂರು, ಬಂಟ್ವಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ.
Related Articles
Advertisement
ಭಾರೀ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಹೀಗಾಗಿ ಹಲೆವೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯವಾಗಿದೆ. ನಿರಂತರ ಮಳೆಯಿಂದಾಗಿ ಮಲೆನಾಡಿನ ತುಂಗಾ, ಭದ್ರಾ, ಹೇಮಾವತಿ ನದಿಗಳು ಸೇರಿದಂತೆ ಹಳ್ಳಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಹೊರನಾಡು- ಕಳಸ ಸಂಪರ್ಕದ ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಇನ್ನು ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ನಿರಂತರ ಮಳೆಯಾದ ಕಾರಣ ಮರಗಳು, ಗುಡ್ಡದ ಮಣ್ಣು ರಸ್ತೆಗುರುಳುತ್ತಿದೆ. ಚಾರ್ಮಾಡಿ ಘಾಟ್ ರಸ್ತೆ ಸಂಪರ್ಕ ಕಡಿತವಾಗಿದೆ.