Advertisement

ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ: ತುಂಬಿ ಹರಿಯುತ್ತಿದೆ ನದಿಗಳು

03:09 PM Jul 17, 2020 | keerthan |

ಚಿಕ್ಕಮಗಳೂರು/ ಉಡುಪಿ: ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗುರುವಾರ ಸಂಜೆಯಿಂದ ಎಡೆಬಿಡೆ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಕುದುರೆಮುಖ, ಕಳಸ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ ಭಾರಿ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಕಳೆದ ರಾತ್ರಿಯಿಂದ ಬಿಡುವಿಲ್ಲದೆ ಮಳೆಯಾಗುತ್ತಿದೆ.

ಭಾರೀ ಮಳೆ ಹಿನ್ನೆಲೆ ಮಲೆನಾಡಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ. ಜಿಲ್ಲೆಯ ನದಿಗಳಾದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈತುಂಬಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next