ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ.
ತುಂಗಾ ಜಲಾಶಯಕ್ಕೆ 39 ಸಾವಿರ ಕ್ಯೂಸೆಕ್ಸ್ ಗೂ ಅಧಿಕ ನೀರು ಬರುತ್ತಿದ್ದು ಅಷ್ಟೂ ನೀರನ್ನು ನದಿಗೆ ಬಿಡಲಾಗುತ್ತಿದ್ದು ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗದ ಕೋರ್ಪಲಯ್ಯ ಮಂಟದ ಮುಕ್ಕಾಲು ಭಾಗ ಮುಳುಗಿದ್ದು, ಸಾರ್ವಜನಿರು ಫೋಟೊ ಕ್ಲಿಕ್ಕಿಸಿಕೊಂಡು ಖುಷಿ ಹಂಚಿಕೊಳ್ಳುತ್ತಿದ್ದಾರೆ.
ಭದ್ರಾ ಜಲಾಶಯಕ್ಕೆ 4908 ಕ್ಯೂಸೆಕ್ಸ್ ಒಳಹರಿವು ಇದ್ದು 186 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಗುರುವಾರ 127 ಅಡಿ ನೀರಿದೆ. ಲಿಂಗನಮಕ್ಕಿ ಜಲಾಶಯಕ್ಕೆ 60238 ಸಾವಿರ ಕ್ಯೂಸೆಕ್ಸ್ ಒಳಹರಿವು ಇದ್ದು, 1819 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಗುರುವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ 1760.1 ಅಡಿ ನೀರಿದೆ.
ಹೊಸನಗರದ ಮಾಸ್ತಿಕಟ್ಟೆಯಲ್ಲಿ 300 ಮಿಮೀ, ಹುಲಿಕಲ್ 267 ಮಿಮೀ, ಯಡೂರು 206 ಮಿಮೀ, ಮಾಣಿಯಲ್ಲಿ 290 ಮಿಮೀ ಮಳೆ ದಾಖಲಾಗಿದೆ.