Advertisement
ನದಿ ದಂಡೆಯ ಜನರಿಗೆ ಎಚ್ಚರಿಕೆಯಿಂದ ಇರಲು ಮೈಕ್ ನಲ್ಲಿ ಕೆಪಿಸಿ ಅಧಿಕಾರಿಗಳು, ಪಿಡಿಒ ಪ್ರಚಾರ ಮಾಡಿದ್ದಾರೆ. ಇನ್ನೊಂದೆಡೆ ಗಂಗಾವಳಿ ನದಿ ತುಂಬಿ ಸುಂಕಸಾಳ ಬಳಿ ರಸ್ತೆಯಲ್ಲಿ ನೀರು ಹರಿದಿದೆ. ರಾ.ಹೆ. 63 ವಾಹನ ಸಂಚಾರ ರದ್ದಾಗಿದೆ. ವಾಹನಗಳನ್ನು ಯಲ್ಲಾಪುರ, ಶಿರಸಿ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ. ಬುಧುವಾರ ಸಂಜೆಯಾದರೂ ಮಳೆ ಸುರಿಯುತ್ತಲೇ ಇದೆ.
ಸೃಷ್ಟಿಯಾಗಿದೆ. ಮಳೆಯೊಂದಿಗೆ ಭಾರೀ ಗಾಳಿಯೂ ಬೀಸುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ. ಕಾರವಾರದಲ್ಲಿ ಬೆಳಗ್ಗೆ ಬೀಸಿದ ಭಾರೀ ಗಾಳಿಗೆ ಹಲವೆಡೆ ವಿದ್ಯುತ್ ಕಂಬಗಳು ಹಾಗೂ ಮರಗಳು ಮುರಿದು ಬಿದ್ದಿವೆ. ಆ. 8ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ. ಭಾರೀ ಅಲೆಗಳ ಅಬ್ಬರದಿಂದ ಕಡಲತೀರಗಳಲ್ಲಿ ಕೊರೆತ ಉಂಟಾಗಿದ್ದು, ದಡಗಳಲ್ಲಿ ಹಾಗೂ ಬಂದರುಗಳಲ್ಲಿ ನಿಲ್ಲಿಸಿದ್ದ ಬೋಟ್‌ಗಳು ಅಲೆಗಳ ಹೊಡೆತಕ್ಕೆ ಹಾನಿಯಾಗಿವೆ. ಸದ್ಯ ಮೀನುಗಾರಿಕೆಗೆ ತೆರಳದಂತೆ ಮೀನುಗಾರಿಕೆ ಇಲಾಖೆ ಸೂಚನೆ ನೀಡಿದೆ.
Related Articles
Advertisement
ಕಳೆದ ವರ್ಷದಂತೆ ಈ ಭಾರಿ ಕೂಡ ಭಾರೀ ಪ್ರಮಾಣದಲ್ಲಿ ಮಳೆಯಾಗುತಿದ್ದು, ಮತ್ತು ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಬಗ್ಗೆ ಹವಮಾನ ಇಲಾಖೆ ಮುನ್ಸೂಚನೆ ನೀಡಿರುವುದು ನದಿ ತೀರದ ಜನರ ಆತಂಕಕ್ಕೆ ಕಾರಣವಾಗಿದೆ.