Advertisement
ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ.
Related Articles
Advertisement
ಕೊಡಗಿನಲ್ಲಿ ಧಾರಾಕಾರ ಮಳೆಕೊಡಗು ಜಿಲ್ಲೆಯಾದ್ಯಂತ ಮಳೆ ತೀವ್ರವಾಗಿದ್ದು, ಬಲವಾದ ಗಾಳಿಯಿಂದ ಆತಂಕ ಸೃಷ್ಟಿಯಾಗಿದೆ. ಕುಶಾಲನಗರ ಮತ್ತು ಸಂಪಾಜೆ ಭಾಗದ ಅಲ್ಲಲ್ಲಿ ಹೆದ್ದಾರಿ ಕುಸಿತ ಕಂಡುಬಂದಿದೆ. ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಾಪೋಕ್ಲು ಮತ್ತು ಮಡಿಕೇರಿ ರಸ್ತೆ ಜಲಾವೃತಗೊಂಡಿದೆ. 30 ಸಾವಿರ ಕ್ಯುಸೆಕ್ ನೀರು ಬಿಡುಗಡೆ
ಕಬಿನಿ ಜಲಾಶಯದ 4 ಕ್ರಸ್ಟ್‌ಗೇಟ್‌ಗಳಿಂದ ಗುರುವಾರ ರಾತ್ರಿಯಿಂದಲೇ 30 ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಹಾಸನ ಜಿಲ್ಲೆಯಲ್ಲೂ ಭಾರೀ ಮಳೆಯಾಗಿದ್ದು ಜನಜೀವನ ಅಸ್ತವ್ಯವ್ಯಸ್ತವಾಗಿದೆ. “ಮಹಾ’ ಮಳೆ: 136 ಸಾವು
ಮಹಾರಾಷ್ಟ್ರದಲ್ಲೂ ವರುಣನ ಅಬ್ಬರ ಮುಂದುವರಿದಿದೆ. ಮುಂಬಯಿ ನಗರ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಅಪಾರ ಹಾನಿ ಸಂಭವಿಸಿದೆ. ಕಳೆದ 40 ವರ್ಷಗಳಲ್ಲೇ ಅತೀ ಹೆಚ್ಚು ಮಳೆಗೆ ಮುಂಬಯಿ ಸಾಕ್ಷಿಯಾಗಿದೆ. ಮಳೆಯಿಂದ 48 ತಾಸುಗಳಲ್ಲಿ 136 ಮಂದಿ ಸಾವನ್ನಪ್ಪಿದ್ದಾರೆ. ರಾಯಗಢ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ 38 ಮಂದಿ ಅಸುನೀಗಿದ್ದಾರೆ. ಮಹಾರಾಷ್ಟ್ರಕ್ಕೆ ಧಾವಿಸಿರುವ ಸೇನೆ, ನೌಕಾಪಡೆ, ವಾಯುಪಡೆ, ಕರಾವಳಿ ರಕ್ಷಕ ಪಡೆ, ಎನ್‌ಡಿಆರ್ ಎಫ್, ಮಹಾರಾಷ್ಟ್ರ ಸರಕಾರದ ಸಂಸ್ಥೆಗಳು ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ.