ಬೆಂಗಳೂರು: ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಿಗೆ ಆ. 5ಕ್ಕೆ ಆರೆಂಜ್, ಆ. 6ಕ್ಕೆ ರೆಡ್ ಅಲರ್ಟ್ ನೀಡಲಾಗಿದೆ.
ಆ. 8ರ ಅನಂತರ ಮಳೆ ಕಡಿಮೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಗುರುವಾರವೂ ವರುಣಾ ರ್ಭಟ ಮುಂದುವರಿದಿದೆ. ರಸ್ತೆಗಳ ಮೇಲೆಲ್ಲ ನೀರು ಹರಿಯುತ್ತಿದ್ದು, ಸೇತುವೆಗಳು ಮುಳುಗಿವೆ. ಮೈಸೂರು, ಮಂಡ್ಯ, ಚಾಮರಾಜನಗರ, ಮಡಿಕೇರಿ, ಹಾಸನ, ತುಮಕೂರು, ಶಿವಮೊಗ್ಗ, ರಾಮನಗರ, ಬೆಂಗಳೂರಿನಲ್ಲೂ ಮಳೆ ಮುಂದುವರಿದಿದೆ.
ಕೊಡಗಿನ ಚೆಂಬು ಗ್ರಾಮ ವ್ಯಾಪ್ತಿ ಯಲ್ಲಿ ಜಲಸ್ಫೋಟದಿಂದ ಮನೆಗಳಿಗೆ ಹಾನಿಯಾಗಿದೆ. ಸಂಪಾಜೆ ಹಾಗೂ ಕಲ್ಲುಗುಂಡಿ ಭಾಗದಲ್ಲಿ ಪಯಸ್ವಿನಿ ನದಿ ರಾಷ್ಟ್ರೀಯ ಹೆದ್ದಾರಿಯನ್ನು ಆವರಿಸಿದ್ದು, ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ದೇವರಕೊಲ್ಲಿಯಲ್ಲಿ ರಸ್ತೆ ಬಿರುಕು ಬಿಟ್ಟ ಪರಿಣಾಮ ಸರಕು ಲಾರಿಗಳ ಸಂಚಾರವನ್ನು ನಿಷೇಧಿಸ ಲಾಗಿದೆ. ಮಾಣಿ-ಮೈಸೂರು
ರಾಷ್ಟ್ರೀಯ ಹೆದ್ದಾರಿಯಲ್ಲೂ ಘನ ವಾಹನಗಳ ಸಂಚಾರವನ್ನು ನಿಷೇಧಿಸ ಲಾಗಿದೆ. ಸಂಪಾಜೆಯಿಂದ ಮಾರ್ಪಡ್ಕ ಮೂಲಕ ಊರುಬೈಲಿಗೆ ಸಂಪರ್ಕ ಕಲ್ಪಿಸುವ ಸೇತುವೆ ರಾತ್ರಿ ಮಳೆಗೆ ಕುಸಿದ ಪರಿಣಾಮ ಸಂಪರ್ಕ ಕಡಿತಗೊಂಡಿದೆ.