ಚೆನ್ನೈ: ತಮಿಳುನಾಡಿನ ಹಲವು ಭಾಗಗಳು ಸೇರಿದಂತೆ ಚೆನ್ನೈನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ನಾಗಪಟ್ಟಣಂ, ಕಿಲ್ವೇಲೂರು ತಾಲೂಕು, ವಿಲುಪುರಂ ಮತ್ತು ಕಡಲೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆಯ ಪರಿಣಾಮ ಕಲ್ಲಕುರಿಚಿ, ರಾಣಿಪೇಟ್, ವೆಲ್ಲೂರು ಮತ್ತು ತಿರುವಣ್ಣಾಮಲೈನಲ್ಲಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಯ ಪರಿಣಾಮ ಕೆಲ ಪ್ರದೇಶಗಳಲ್ಲಿ ಮುಖ್ಯ ರಸ್ತೆ ತುಂಬಾ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಯಿತು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು.
ಮುಂದಿನ ಏಳು ದಿನಗಳ ಕಾಲ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Bangladesh polls: ಐದನೇ ಅವಧಿಗೆ ಪ್ರಧಾನಿಯಾಗಿ ಮರು ಆಯ್ಕೆಯಾದ ಶೇಖ್ ಹಸೀನಾ