ತಮಿಳುನಾಡು : ತಮಿಳುನಾಡಿನಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ನಗರ ಮತ್ತು ಹೊರವಲಯದ ಹಲವು ಪ್ರದೇಶಗಳು ಜಲಾವೃತವಾಗಿವೆ. ಒಬ್ಬ ವ್ಯಕ್ತಿಗೆ ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದರೆ, ಬಾರಿ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಸರ್ಕಾರ ಬುಧವಾರ ಚೆನ್ನೈ, ತಿರುವಳ್ಳೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿರುವ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಇಂದು ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು ಆದರೆ ಭಾರತೀಯ ಹವಾಮಾನ ಇಲಾಖೆ ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದೆ.
ನಗರದ ಪ್ರಮುಖ ಪ್ರದೇಶವಾದ ನುಂಗಂಬಾಕ್ಕಂನಲ್ಲಿ ಒಂದೇ ದಿನದಲ್ಲಿ 8 ಸೆಂ.ಮೀ, ಉಪನಗರ ರೆಡ್ ಹಿಲ್ಸ್ 13 ಸೆಂ.ಮೀ ಮತ್ತು ಪೆರಂಬೂರ್ 12 ಸೆಂ.ಮೀ ಮಳೆ ದಾಖಲಾಗಿದೆ.
ಇದನ್ನೂ ಓದಿ : ಶಿವಮೊಗ್ಗ: ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ಸಕ್ರೆಬೈಲಿನ ಸೂರ್ಯ ಆನೆ