Advertisement
ಬಿಸಿಲು ಮೋಡ ಕವಿದ ವಾತಾವರಣದೊಂದಿಗೆ ಮಧ್ಯಾಹ್ನ ಆರಂಭಗೊಂಡ ಮಳೆ ರಾತ್ರಿವರೆಗೂ ಸುರಿದಿದೆ. ಉಡುಪಿ, ಪರ್ಕಳ, ಮಲ್ಪೆ, ಮಣಿಪಾಲ ಸುತ್ತಮುತ್ತ ಹೆಚ್ಚಿನ ಮಳೆಯಾಗಿದ್ದು, ಹೆದ್ದಾರಿಗಳಲ್ಲಿ ಮಳೆ ನೀರು ನಿಂತು ಸವಾರರು ತೊಂದರೆ ಅನುಭವಿಸಿದರು. ಇಂದ್ರಾಳಿ ಸೇತುವೆ ಸಮೀಪದ ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಕೆಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಉಳಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿದಿತ್ತು. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸಕೆ ಹೆಚ್ಚಿತ್ತು.